ಬೆಂಗಳೂರು: ಖಾಸಗಿ ದೇವಸ್ಥಾನದ ಬ್ರಾಹ್ಮಣ ಅರ್ಚಕರು, ಪುರೋಹಿತರು, ಅಡುಗೆಯವರಿಗೆ ನೆರವು ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಧನಸಹಾಯ, ದಿನಸಿ ಕಿಟ್ ಒದಗಿಸುವಂತೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮನವಿ ಸಲ್ಲಿಸಿದರು.
ಇಂದು ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರನ್ನು ಅವರ ಗೃಹ ಕಚೇರಿ ಕೃಷ್ಣದಲ್ಲಿ ಬೇಟಿ ಮಾಡಿ, ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಅತಿ ಶೀಘ್ರದಲ್ಲೇ ಎರಡನೆಯ ಪ್ಯಾಕೇಜ್ ಘೋಷಿಸುತ್ತಾರೆಂದು ತಿಳಿದು ಬ್ರಾಹ್ಮಣ ಸಮುದಾಯದ ಖಾಸಗಿ ದೇವಸ್ಥಾನದ ಅರ್ಚಕರು, ಪುರೋಹಿತರು ಮತ್ತು ಅಡುಗೆ ಕೆಲಸದವರಿಗೆ ಧನಸಹಾಯ ನೀಡುವ ಬಗ್ಗೆ ಮನವಿ ಪತ್ರ ನೀಡಲಾಯಿತು ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಈ ಕೂಡಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ, ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ (ಕರ್ನಾಟಕ ಸರ್ಕಾರ) ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ರವರು, ವಿರಶೈವ ಅಭಿವೃದ್ಧಿ ನಿಗಮ (ಕರ್ನಾಟಕ ಸರ್ಕಾರ) ಅಧ್ಯಕ್ಷರಾದ ಶ್ರೀ ಪರಮಶಿವಯ್ಯ ರವರು, ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು, ಬಿಜೆಪಿ ಯುವಮೋರ್ಚಾ ಬೆಂಗಳೂರು ಉತ್ತರ ಜಿಲ್ಲೆ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಉಪಸ್ಥಿತರಿದ್ದರು.
ಡಿ ಎಸ್ ಸುಧೀಂದ್ರ
ರಾಜ್ಯ ಪ್ರಧಾನ ಕಾರ್ಯದರ್ಶಿ
ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ)

0 Comments