Ticker

6/recent/ticker-posts

Ad Code

Responsive Advertisement

ಇದು ಕಷ್ಟದ ಸಮಯ, ನಾವು ಜನತೆಯ ಜೊತೆಗಿದ್ದೇವೆ: ಆರ್ ಅಶೋಕ

ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಡೀ ದೇಶಕ್ಕೆ ಉಚಿತ ಲಸಿಕೆ ನೀಡಿದ್ದಾರೆ. ಯಡಿಯೂರಪ್ಪನವರು 1500 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೋವಿಡ್ ನಿಂದ ಮರಣ ಹೊಂದಿದವರ ಮನೆಗೆ ಹೋಗಿ ಸಾಂತ್ವನ ಹೇಳುವುದು ನಮ್ಮ ಜವಾಬ್ದಾರಿ, ಪಕ್ಷದ ಕಾರ್ಯಕರ್ತರು ಈ ಕಾರ್ಯ ಮಾಡಬೇಕು ಎಂದು ಸೂಚಿಸಲಾಗಿದೆ. ಇದೊಂದು ಕಷ್ಟದ ಘಳಿಗೆಯಾಗಿದ್ದು, ನಮ್ಮ ಸರ್ಕಾರ ಸಂಪೂರ್ಣವಾಗಿ ಬಡವರ, ನೆರವಿನ ನಿರೀಕ್ಷೆಯಲ್ಲಿರುವವರ ಜೊತೆಯಲ್ಲಿ ನಿಲ್ಲಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.

ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಆಟೋ ಚಾಲಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವರ್ಗದವರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಸಚಿವರು,"ಕೋವಿಡ್ ನಿಂದ ಸಾವನ್ನಪ್ಪಿದವರ ಕುಟುಂಬದ ಬೆಂಬಲಕ್ಕೆ ನಿಲ್ಲುವ ನಿಟ್ಟಿನಲ್ಲಿ ನಾನೂ ಹಾಗೂ ಆರು ಜನ ಸಚಿವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂಥಹ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜೊತೆಗೆ ಪರಿಹಾರ ಹಣವನ್ನು ನೀಡಿದ್ದೇವೆ. 
ರಾಜ್ಯ ಸರ್ಕಾರ ಕೂಡಾ ಹೀಗೆ ಕೋವಿಡ್ ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ಘೋಷಿಸಿದೆ. ಇಷ್ಟೆಲ್ಲಾ ಕೆಲಸಗಳನ್ನ ಮಾಡುತ್ತಿದ್ದರೂ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಬರೀ ಪೊಳ್ಳು ಟೀಕೆ, ಆಪಾದನೆಗಳಲ್ಲಿ ಕಾಲ ಕಳೆಯುತ್ತಿದೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ. ಕಷ್ಟದಲ್ಲಿದ ಸಂದರ್ಭಗಳಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್ ವೃಥಾ ಆರೋಪಗಳನ್ನ ಮಾಡುತ್ತಿದೆ. ವಿರೋಧ ಪಕ್ಷಗಳು ಏನೇ ಮಾತನಾಡಿದರು ನಾವು ಮಾತ್ರ ಸದಾ ಜನರ ಕಷ್ಟದಲ್ಲಿ ಜೊತೆಯಾಗಿರುವ ಕೆಲಸ ಮಾಡುತ್ತೇವೆ", ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ ರವಿ, ಬೆಂಗಳೂರು ಉತ್ತರ ಬಿಜೆಪಿ ಅಧ್ಯಕ್ಷರಾದ ಬಿ. ನಾರಾಯಣ್, ರಾಜ್ಯ ಮಹಿಳಾ ಮೋರ್ಚ ಅಧ್ಯಕ್ಷರಾದ ಗೀತಾ ವಿವೇಕಾನಂದ ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement