Ticker

6/recent/ticker-posts

Ad Code

Responsive Advertisement

ಬಿಜೆಪಿ ಆಡಳಿತ ಟೀಕಿಸುವ ನೈತಿಕತೆ ಕಾಂಗ್ರೆಸ್‌ಗಿಲ್ಲ: ಬಿ.ವೈ. ವಿಜಯೇಂದ್ರ

 


ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.

ಕಾಂಗ್ರೆಸ್‌ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು.

ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷವಹಿಸಿರೋ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.

ಈ ವೇಳೆ ಮೈ ಸೇವಾ ಫೌಂಡೇಶನ್ ನಿಂದ ತರಕಾರಿ ಹಾಗೂ ದಿನಸಿ ಕಿಟ್ ವಿತರಣೆ ಮಾಡಿದರು. ಮೃಗಾಲಯದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮೃಗಾಲಯದಲ್ಲಿ  ಕೆಲಸ ಮಾಡುವ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು.
ಪ್ರಾಧಿಕಾರದ ಅಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

Post a Comment

0 Comments

Ad Code

Responsive Advertisement