Ticker

6/recent/ticker-posts

Ad Code

Responsive Advertisement

ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಬೆಂಗಳೂರಿಗರು ದಂಡ ಕಟ್ಟಿದ್ದೆಷ್ಟು ಗೊತ್ತಾ?


 
ಕೊರೊನಾ 2ನೇ ಅಲೆ ತಡೆಯಲು ಕರ್ನಾಟಕ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಬೆಂಗಳೂರು ನಗರ ಪೊಲೀಸರು ಪ್ರತಿಯೊಂದು ವಿಭಾಗದಲ್ಲಿಯೂ ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಜನರು ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಬಗ್ಗೆ ಕಣ್ಗಾವಲಿಟ್ಟಿದ್ದರು. 

ಬೆಂಗಳೂರು ನಗರದಲ್ಲಿ ಜನರು ಲಾಕ್‌ಡೌನ್ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ 4.54 ಕೋಟಿ ದಂಡ ಕಟ್ಟಿದ್ದಾರೆ.

ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದ ಜನರಿಂದ ದಂಡವನ್ನು ಸಂಗ್ರಹ ಮಾಡಿದ್ದಾರೆ. ಮಾಸ್ಕ್ ಧರಿಸಿದ 1.52 ಲಕ್ಷ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ 34 ಸಾವಿರ ಜನರಿಗೆ ದಂಡವನ್ನು ಹಾಕಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

 ಜೂನ್ 14ರ ತನಕ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10 ಗಂಟೆ ತನಕ ಮಾತ್ರ ಅವಕಾಶ ನೀಡಲಾಗಿತ್ತು. ಬಳಿಕ ಅನಗತ್ಯವಾಗಿ ಸಂಚಾರ ನಡೆಸಿದರೆ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದರು. ಅನಗತ್ಯವಾಗಿ ಸಂಚಾರ ನಡೆಸಿದ ಜನರಿಂದ 43,615 ದ್ವಿಚಕ್ರ ವಾಹನ, 2,326 ಮೂರು ಚಕ್ರದ ವಾಹನಗಳು ಮತ್ತು 3,083 ನಾಲ್ಕು ಚಕ್ರದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಲಾಕ್‌ಡೌನ್ ಸಂಪೂರ್ಣವಾಗಿ ಮುಕ್ತಾಯವಾದ ಬಳಿಕ ಜನರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ತೆರಳಿ ವಾಹನಗಳನ್ನು ದಂಡಕಟ್ಟಿ ಬಿಡಿಸಿಕೊಳ್ಳಬಹುದು.
 

Post a Comment

0 Comments

Ad Code

Responsive Advertisement