ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮ ಸಂಪಾದಕ, ಪದ್ಮಶ್ರೀ ಗೌರವಕ್ಕೆ ಪಾತ್ರವಾಗಿರುವ ಕೆ.ವಿ. ಸಂಪತ್‌ಕುಮಾರ್ (64) ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
1970ರಲ್ಲಿ, ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ತಲುಪಿಸುವ ಉದ್ದೇಶದಿಂದ ವರದರಾಜ ಅಯ್ಯಂಗಾರ್ ಅವರು ಸುಧರ್ಮ ಪತ್ರಿಕೆ ಪ್ರಾರಂಭಿಸಿದರು. ಅವರ ನಿಧನಾ ನಂತರ ಸಂಪಾದಕ ಹುದ್ದೆ ವಹಿಸಿಕೊಂಡ ಪುತ್ರ ಕೆ.ವಿ.ಸಂಪತ್ ಕುಮಾರ್ ಹಾಗೂ ಇವರ ಪತ್ನಿ ಜಯಲಕ್ಷ್ಮಿ ಪತ್ರಿಕೆಯನ್ನು ಈವರೆಗೆ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದರು.
ಸಂಪತ್ ಕುಮಾರ್ ತಮ್ಮ ತಂದೆಯ ಇಚ್ಛೆಯಂತೆ ಸಂಸ್ಕೃತ ಭಾಷೆ ಪಸರಿಸುವ ಕೆಲಸ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬಂದಿದ್ದರು. 2009ರಲ್ಲಿ ಸುಧರ್ಮ ಇ-ಪೇಪರ್ ಆವೃತ್ತಿ ಪ್ರಾರಂಭಿಸಿ ಜಗತ್ತಿನಾದ್ಯಂತ ಹಲವರು ಸಂಸ್ಕೃತ ಪತ್ರಿಕೆಯನ್ನು ಓದುವಂತೆ ಮಾಡಿದ್ದರು.


0 Comments