Ticker

6/recent/ticker-posts

Ad Code

Responsive Advertisement

ಭಾರಿ ಮಳೆಯ ಮುನ್ಸೂಚನೆ

 ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಜೂನ್ 8 ರಿಂದ 9 ರವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಳೆಯಾಗಲಿದೆ. ಜೂನ್ 10 ಹಾಗೂ 11 ರಂದು ಗುಡುಗುಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡಿನಲ್ಲಿ ಜೂ. 7 ರಿಂದ 11 ರವರೆಗೆ ಸಾಧಾರಣ ಮಳೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 7 ರಿಂದ 11 ರ ವರೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. 

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗರಿಷ್ಠ ಉಷ್ಣಾಂಶ 32 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬುಧವಾರದವರೆಗೂ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

 ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎನ್ನಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.


Post a Comment

0 Comments

Ad Code

Responsive Advertisement