Ticker

6/recent/ticker-posts

Ad Code

Responsive Advertisement

ಕೋವಿಶೀಲ್ಡ್, ಕೋವ್ಯಾಕ್ಸಿನ್ ಯಾವುದು ಉತ್ತಮ?



 ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ನೀಡಲಾಗುತ್ತಿರುವ ಲಸಿಕೆಗಳಲ್ಲಿ ಕೋವ್ಯಾಕ್ಸಿನ್ ಲಸಿಕೆಗಿಂತ ಕೋವಿಶೀಲ್ಡ್ ಲಸಿಕೆ ಹೆಚ್ಚಿನ ಮಟ್ಟದಲ್ಲಿ ಪ್ರತಿಕಾಯಗಳನ್ನು ಉತ್ಪತ್ತಿ ಮಾಡುತ್ತದೆ ಎಂಬ ಅಂಶ ತಿಳಿದುಬಂದಿದೆ. Covat ಪ್ರಾಥಮಿಕ ಅಧ್ಯಯನ ಈ ಮಾಹಿತಿಯನ್ನು ನೀಡಿದೆ.  

ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಈ ಅಧ್ಯಯನದಲ್ಲಿ  ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದವರನ್ನು ಅಧ್ಯಯನದಲ್ಲಿ ಬಳಸಿಕೊಂಡು, ಫಲಿತಾಂಶವನ್ನು ಕಂಡುಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ಸೆರಂ ಇನ್ಸ್ಟಿಟ್ಯೂಟ್ನ ಕೋವಿಶೀಲ್ಡ್ ಗಿಂತ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆ ಹೆಚ್ಚಿನ ಪ್ರತಿಕಾಯಗಳನ್ನು ಉತ್ಪಾದಿಸುತ್ತದೆ ಎಂದು ತಿಳಿದುಬಂದಿದೆ.

ಒಟ್ಟು 552 ಆರೋಗ್ಯ ಕಾರ್ಯಕರ್ತರನ್ನು ಈ ಅಧ್ಯಯನದಲ್ಲಿ ಬಳಸಿಕೊಳ್ಳಲಾಗಿತ್ತು. ಅದರಲ್ಲಿ 456 ಮಂದಿಗೆ ಕೋವಿಶೀಲ್ಡ್ ಹಾಗೂ 96 ಮಂದಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗಿತ್ತು. ಹೋಲಿಕೆಯಲ್ಲಿ 79.3% ಸೆರೊಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ. ಇದರಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಹೆಚ್ಚಿನ ಆ್ಯಂಟಿ ಸ್ಪೈಕ್ ಪ್ರತಿಕಾಯ ಸೃಷ್ಟಿಯಾಗಿರುವುದು ಕಂಡುಬಂದಿದೆ.

ಕೋವ್ಯಾಕ್ಸಿನ್ಗೆ ಹೋಲಿಸಿದರೆ, ಮೊದಲ ಡೋಸ್ ಲಸಿಕೆ ಪಡೆದ ನಂತರ ಸೋಂಕಿನ ವಿರುದ್ಧ ಹೋರಾಡಲು ಕೋವಿಶೀಲ್ಡ್ನಲ್ಲಿ ಹೆಚ್ಚಿನ ಪ್ರತಿಕಾಯ ಸೃಷ್ಟಿಯಾಗಿರುವುದು ಕಂಡುಬಂದಿದೆ. ಕೋವಿಶೀಲ್ಡ್ನಲ್ಲಿ ಸೆರೊಪಾಸಿಟಿವಿಟಿ ಪ್ರಮಾಣವೂ ಹೆಚ್ಚಿದೆ ಎಂದು ಅಧ್ಯಯನ ತಿಳಿಸಿದೆ. ಲಸಿಕೆಗಳ ಎರಡು ಡೋಸ್ ಪಡೆದ ನಂತರ ಸೋಂಕಿನ ವಿರುದ್ಧ ಹೋರಾಡುವಲ್ಲಿ ಈ ಎರಡೂ ಲಸಿಕೆಗಳು ಪರಿಣಾಮಕಾರಿ ಎಂದು ತಿಳಿದುಬಂದಿದೆ. ಕೋವಿಶೀಲ್ಡ್ನಲ್ಲಿ ಪ್ರತಿಕಾಯಗಳು ಅತಿ ಶೀಘ್ರವಾಗಿ ಉತ್ಪತ್ತಿಯಾಗಿರುವುದು ಕಂಡುಬಂದಿದೆ.

Covat ಅಧ್ಯಯನದಲ್ಲಿ, ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಉತ್ತಮ ರೋಗನಿರೋಧಕ ಪ್ರತಿಕ್ರಿಯೆ ನೀಡಿರುವುದು ಕಂಡುಬಂದಿದೆ. ಆದರೆ ಹೋಲಿಕೆಯಲ್ಲಿ ಕೋವಿಶೀಲ್ಡ್ನಲ್ಲಿ ಪ್ರತಿಕಾಯ ಸೃಷ್ಟಿ ಹೆಚ್ಚಿದೆ. ಮೊದಲ ಡೋಸ್ ಪಡೆದ ನಂತರ ಕೋವ್ಯಾಕ್ಸಿನ್ಗಿಂತ ಕೋವಿಶೀಲ್ಡ್ನಲ್ಲಿ ಹೆಚ್ಚಿನ ಪ್ರತಿಕಾಯ ಸೃಷ್ಟಿ ಕಂಡುಬಂದಿದೆ. ಆದರೆ ಎರಡೂ ಡೋಸ್ಗಳನ್ನು ಪಡೆದುಕೊಂಡ ನಂತರ ಎರಡೂ ಲಸಿಕೆಗಳು ಉತ್ತಮ ಪ್ರತಿಕ್ರಿಯೆ ತೋರಿಸಿವೆ ಎಂದು ತಿಳಿಸಿದೆ.

Post a Comment

0 Comments

Ad Code

Responsive Advertisement