Ticker

6/recent/ticker-posts

Ad Code

Responsive Advertisement

ಕೊರೊನಾ ಲಸಿಕೆಯತ್ತ ಹೆಚ್ಚಿದ ಎಲ್ಲರ ಒಲವು

 

ಭಾರತದಲ್ಲಿ ಪ್ರತಿ ಗಂಟೆಗೆ 1.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಕೊವಿಡ್-19 ಲಸಿಕೆ ಉತ್ಪಾದನೆ ಜೊತೆಗೆ ವಿತರಣೆ ವೇಗ ಹೆಚ್ಚಿಸುವುದಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ಎಲ್ಲ ರಾಜ್ಯಗಳಿಗೆ ಉಚಿತವಾಗಿ ಕೇಂದ್ರದಿಂದಲೇ ಲಸಿಕೆ ಪೂರೈಸಲಾಗುವುದು ಎಂದು ಘೋಷಿಸಿದ್ದಾರೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,18,38,338 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,14,36,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,09,90,200 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,93,37,31 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 143 ದಿನಗಳಲ್ಲಿ 23,61,98,726 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 31,04,989 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 27,97,493 ಜನರಿಗೆ ಮೊದಲ ಡೋಸ್ ಹಾಗೂ 3,07,496 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 3,02,45,100 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 2,37,107 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 99,81,949 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,76,906 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,62,99,343 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 86,96,391 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19  ಲಸಿಕೆ ನೀಡಲಾಗಿದೆ.

Post a Comment

0 Comments

Ad Code

Responsive Advertisement