Ticker

6/recent/ticker-posts

Ad Code

Responsive Advertisement

ವಿದ್ಯಾರ್ಥಿಗಳು, ಶಿಕ್ಷಕರಿಗೆ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ


 ರಾಜ್ಯದಲ್ಲಿ ಆದಷ್ಟು ಬೇಗ ಶಾಲಾ-ಕಾಲೇಜುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ಹೆಸರಾಂತ ವೈದ್ಯ ಡಾ.ದೇವಿಶೆಟ್ಟಿ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.  ಕಾಲೇಜು ಪುನರಾರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ನೀಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ದೇವಿಶೆಟ್ಟಿ ನೇತೃತ್ವದ ಸಮಿತಿಯು ಶಾಲೆ,ಕಾಲೇಜು ಹಂತ ಹಂತವಾಗಿ ಆರಂಭಿಸಲು ಸಲಹೆ ನೀಡಿದೆ. ಹೀಗಾಗಿ ಶಿಕ್ಷಕರು ಹಾಗೂ 18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿ ಕಾಲೇಜು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. 

ಸಮಿತಿ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಶಾಲೆಗಳ ಪುನರಾರಂಭ ಕುರಿತು ಯಾವುದೇ ರೀತಿಯ ಚರ್ಚೆಗಳನ್ನೂ ಮಾಡಿಲ್ಲ ಎಂದು ತಿಳಿಸಿದ್ದಾರೆ. 

ಶಾಲೆ-ಕಾಲೇಜು ಪ್ರಾರಂಭಿಸುವುದನ್ನು ತಡ ಮಾಡಿದರೆ ಮಕ್ಕಳಲ್ಲಿ ಅಪೌಷ್ಠಿಕತೆ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಭಿಕ್ಷಾಟನೆಯಂತಹ ಪಿಡುಗುಗಳು ಹೆಚ್ಚುತ್ತವೆ. ಇದು ಕೋವಿಡ್19 ನಿಂದಾಗುವ ಪರಿಣಾಮಗಳಿಗಿಂತ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ. 

ಶಾಲೆ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರು, ಶಿಕ್ಷಕರು, ಶಾಲಾ-ಆಡಳಿತ ಮಂಡಳಿಗಳು ಸೇರಿ ಸಂಬಂಧಿಸಿದ ಎಲ್ಲರೊಂದಿಗೆ ಚರ್ಚೆ ನಡೆಸಬೇಕು. ಸಾಧ್ಯವಾದಷ್ಟು ಶಾಲಾ-ಕಾಲೇಜು ಆರಂಭ ನಿರ್ಧಾರವನ್ನು ವಿಕೇಂದ್ರೀಕರಿಸಿ ಆಯಾ ಸ್ಥಳೀಯ ಸಂಸ್ಥೆಗಳು ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳಿಗೆ ಬಿಡಬೇಕು ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

Post a Comment

0 Comments

Ad Code

Responsive Advertisement