Ticker

6/recent/ticker-posts

Ad Code

Responsive Advertisement

ಭಾರತದಲ್ಲಿ ಗಂಟೆಗೊಂದು ಲಕ್ಷಕ್ಕೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ!

 

ಭಾರತದಲ್ಲಿ ಪ್ರತಿಯೊಂದು ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 151 ದಿನಗಳಲ್ಲಿ 26,17,40,273 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 21,98,144 ಜನರಿಗೆ ಮೊದಲ ಡೋಸ್ ಹಾಗೂ 3,70,714 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 4,49,87,004 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 8,95,517 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಭಾರತದಲ್ಲಿ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 1,00,78,623 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,99,669 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,69,05,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,06,072 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,72,40,865 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,21,93,878 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,32,64,880 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,02,68,057 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Post a Comment

0 Comments

Ad Code

Responsive Advertisement