ಮೈ ಸ್ಕೈ ಲ್ಯಾಂಡ್ ಫಿಲಂ ಸ್ಟುಡಿಯೋ ಮಾಲೀಕ ಮತ್ತು ಕನ್ನಡ ಚಿತ್ರರಂಗದ ನಿರ್ಮಾಪಕ ದಿಲೀಪ್ ಕುಮಾರ್ ಅವರು ತಮ್ಮ ವೃತ್ತಿ ರಂಗದ ಹಲವಾರು ಕಲಾವಿದರೊಂದಿಗೆ ಆಮ್ ಆದ್ಮಿ ಪಾರ್ಟಿಯನ್ನು ಸೇರಿದ್ದಾರೆ. ಇವರು ಇಂಡಿಯನ್ ಫಿಲಂ ಮೇಕರ್ಸ್ ಅಸೋಸಿಯೇಶನ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಕಲಾವಿದರು ಮತ್ತು ಕೆಲಸಗಾರರಿಗೆ ಕೊರೋನಾ ಎರಡನೇ ಅಲೆಯ ಸಮಯದಲ್ಲಿ ಸಾಕಷ್ಟು ನೆರವಾಗಿದ್ದಾರೆ.
ಆಮ್ ಆದ್ಮಿ ಪಾರ್ಟಿಯ ಜನಪರ ತತ್ವ ಸಿದ್ಧಾಂತಗಳನ್ನು ಮೆಚ್ಚಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಆದಿ ಶಂಕರ ಅದ್ವೈತ ಪೀಠದ ಶ್ರೀಗಳ ಉಪಸ್ಥಿತಿಯಲ್ಲಿ ಪಕ್ಷವನ್ನು ಸೇರಿದ್ದಾರೆ.
ಈ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ, ಉಪಾಧ್ಯಕ್ಷ ಬಿ ಟಿ ನಾಗಣ್ಣ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಲಕ್ಷ್ಮಿಕಾಂತ್ ರಾವ್, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ,ಜ್ಯೋತಿಷ್ ಕುಮಾರ್, ಗೌರಿ ಪ್ರಸಾದ್,ದಿನೇಶ್, ಕಾರ್ತಿಕ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



0 Comments