ಬೆಂಗಳೂರು,ಜೂ.೨೬- ಬೆಂಗಳೂರು ಮಹಾನಗರಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೀಶ್ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ೨೪ ಗಂಟೆಗಳಲ್ಲೇ ಬಂಧಿಸುವ ಮೂಲಕ ಪೊಲೀಸರು ದಕ್ಷತೆ ಮತ್ತು ಪ್ರಾಮಾಣಿಕತೆ ಮೆರೆದಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಶಂಸಿಸಿದ್ದಾರೆ. ಅಂತಾರಾಷ್ಟಿಯ ಮಾದಕ ವಸ್ತುಗಳ ರಹಿತ ದಿನಾಚರಣೆ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಪ್ರಕರಣ ನಡೆದ ನಂತರ ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ೨೪ ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿ ಇಲಾಖೆಯ ಗೌರವವನ್ನು ಹೆಚ್ಚಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳು ಎಲ್ಲೆ ಇದ್ದರೂ ಎಷ್ಟೇ ಪ್ರಭಾವಿಗಳಾಗಿದ್ದರೂ ಬಂಧಿಸಬೇಕೆAದು ಸೂಚನೆ ನೀಡಲಾಗಿತ್ತು. ಅದರಂತೆ ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಈವರೆಗೂ ಒಟ್ಟು ೫ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅದರಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದಾಗ ಅವರ ಕಾಲಿಗೆ ಅನಿವಾರ್ಯವಾಗಿ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಉಳಿದ ಮೂವರು ಆರೋಪಿಗಳನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.
ಮಾದಕ ವಸ್ತು ಯುವಜನತೆಯ ಭವಿಷ್ಯ ಹಾಳುಮಾಡುತ್ತದೆ. ಇದು ಅಂತಾರಾಷ್ಟಿçÃಯ ಪಿಡುಗಾಗಿದ್ದು, ಇದನ್ನು ಬುಡಸಮೇತ ಕಿತ್ತು ಹಾಕಲು ಪ್ರತಿಯೊಬ್ಬರು ಪಣ ತೊಡಬೇಕಿದೆ. ಸರ್ಕಾರ ಮತ್ತು ಕಾನೂನಿಂದಲೇ ಸಾಧ್ಯವಿಲ್ಲ. ಸಾರ್ವಜನಿಕರು ಸಹ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಹೆಚ್ಚಾಗುತ್ತಿದೆ. ಆರೋಪಿಗಳು ನ್ಯಾಯಾಲಯದಿಂದ ಬಹುಬೇಗನೆ ಜಾಮೀನು ಪಡೆದು ಆಚೆ ಬರುತ್ತಾರೆ. ಮತ್ತೆ ಮತ್ತೆ ಇಂತಹುದೇ ಕೃತ್ಯಗಳನ್ನು ನಡೆಸಲು ಆರಂಭಿಸುತ್ತಾರೆ ಎಂದು ವಿಷಾದಿಸಿದರು. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈಗಿರುವ ಕಾಯ್ದೆಯಲ್ಲಿನ ಕೆಲವು ನಿಯಮಗಳಿಗೆ ತಿದ್ದುಪಡಿ ಮಾಡಲು ತೀರ್ಮಾನಿಸಿದ್ದೇವೆ. ಇದು ರಾಷ್ಟಿçÃಯ ಕಾಯ್ದೆಯಾಗಿರುವುದರಿಂದ ನಾವು ತಿದ್ದುಪಡಿ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ನಗರ ಸೇರಿದಂತೆ ೫ ಜಿಲ್ಲೆಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು ೫೦ ಕೋಟಿಗೂ ಹೆಚ್ಚು ಬೆಲೆ ಬಾಳುವ ಶೇ.೬೦ರಷ್ಟು ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದಂತೆ ನಾಶಪಡಿಸಲಾಗಿದೆ. ಉಳಿದಿರುವ ಶೇ.೪೦ರಷ್ಟು ಮಾದಕ ವಸ್ತುಗಳನ್ನು ಎಫ್‌ಎಸ್‌ಎಲ್ ವರದಿ ಬಂದ ನಂತರ ನಾಶಪಡಿಸಲಾಗುವುದು ಎಂದು ವಿವರಿಸಿದರು.
ಕಾಯ್ದೆಗೆ ಎಲ್ಲಿಯೂ ಧಕ್ಕೆಯಾಗದಂತೆ ಅದರಲ್ಲಿರುವ ಕೆಲವು ನಿಯಮಗಳನ್ನು ತಿದ್ದುಪಡಿ ಮಾಡುವ ಸಂಬAಧ ರಾಷ್ಟಿçÃಯ ಕಾನೂನು ಶಾಲೆಗೆ ಜವಾಬ್ದಾರಿ ನೀಡಿದ್ದೇವೆ. ಅವರು ವರದಿ ನೀಡಿದ ನಂತರ ತಕ್ಷಣವೇ ಈ ಕಾಯ್ದೆಗೆ ಹೊಸ ನಿಯಮಗಳನ್ನು ಸೇರ್ಪಡೆ ಮಾಡಲಾಗುವುದೆಂದು ತಿಳಿಸಿದರು. ಮಾದಕ ವಸ್ತುಗಳಲ್ಲಿ ಭಾಗಿಯಾಗುವವರಿಗೆ ತಕ್ಷಣವೇ ಜಾಮೀನು ಸಿಗದಂತೆ ಮಾಡುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸುವುದು ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‌ಪಂಥ್, ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
0 Comments