ಮಲ್ಲೇಶ್ವರಂ ಕ್ಷೇತ್ರದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಆಮ್ ಆದ್ಮಿ ಗೆ ಸೇರ್ಪಡೆ
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರಾದ ಪುಟ್ಟಣ್ಣ ಗೌಡ ರವರ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ವಯ್ಯಾಲಿ ಕಾವಲ್ ನ ಟಿ ಟಿ ಡಿ ಕಲ್ಯಾಣ ಮಂಟಪದ ಸಮೀಪ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಅಧ್ಯಕ್ಷರಾದ ಮೋಹನ್ ದಾಸರಿ ಅವರು ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಮಲ್ಲೇಶ್ವರಂ ಕ್ಷೇತ್ರದ ಶಾಸಕ ಹಾಗೂ ಉಪ ಮುಖ್ಯಮಂತ್ರಿಗಳಾಗಿರುವ ಅಶ್ವತ್ಥ ನಾರಾಯಣರವರು COVID ಕಾರ್ಯಪಡೆಯ ಅಧ್ಯಕ್ಷರಾಗಿ ಲಸಿಕೆಗಳನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು. ಈ ಸೇರ್ಪಡೆ ಮುಂದಿನ ದಿನಗಳಲ್ಲಿ ಅಶ್ವತ್ಥನಾರಾಯಣ ರವರನ್ನು ಮನೆಗೆ ಕಳುಹಿಸುವಲ್ಲಿ ನಾಂದಿಯಾಗುತ್ತದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಲಕ್ಷ್ಮೀಕಾಂತ ರಾವ್ , ಜಗದೀಶ್ ವಿ ಸದo, ರಾಜಶೇಖರ್ ದೊಡ್ಡಣ್ಣ , ಪ್ರಕಾಶ್ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಸುಮನ್ ಪ್ರಶಾಂತ್ ಹಾಗೂ ಅನೇಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.




0 Comments