ಬೆಂಗಳೂರು, ಜೂನ್ 22: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೂ ಹೆಚ್ಚು ಕೊರೊನಾ ಸೋಂಕು ತಗುಲುವ ಸಾಧ್ಯತೆ ಇರುವ ಕಾರಣ ಬೆಂಗಳೂರಿಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಮಕ್ಕಳಿಗಾಗಿಯೇ ರಾಜ್ಯದ ವಿವಿಧೆಡೆ 1419 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 141 ವೆಂಟಿಲೇಟರ್ ಬೆಡ್, 116 ವೆಂಟಿಲೇಟರ್ ರಹಿತ ಐಸಿಯು ಬೆಡ್, 430 ಎಚ್‍ಡಿಯು ಹಾಸಿಗೆ ಹಾಗೂ 712 ಸಾಮಾನ್ಯ ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ.
3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಆತಂಕ ಶುರುವಾಗಿದ್ದು, ಹೀಗಾಗಿ ಮಕ್ಕಳಿಗಾಗಿಯೇ ನಗರದಲ್ಲಿ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆಗಳು ಬಂದಿದೆ.
ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಮುಖ್ಯಮಂತ್ರಿಗಳ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಳೀಯ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮಕ್ಕಳನ್ನು ನೋಡಿಕೊಳ್ಳಲು ತಾಯಿಯಂದಿರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ಒಟ್ಟು 2,38,257 ಮಕ್ಕಳಿಗೆ ಸೋಂಕು ತಗುಲಿತ್ತು. ಒಂದು ಮತ್ತು 2ನೇ ಅಲೆಯಲ್ಲಿ 50 ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಅನಾಥ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಸಹಾಯಧನ ನೀಡಲಾಗುವುದು. ಈ ಯೋಜನೆಯಲ್ಲಿ ಪ್ರತೀ ತಿಂಗಳು ತಲಾ ರೂ.3,500 ನೀಡಲಾಗುವುದು. ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆದಿದೆ ‘ರಾಜ್ಯದಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ. ಅದು ಯಶಸ್ವಿಯಾದರೆ ಮುಂದಿನ ತೀರ್ಮಾನ ಪ್ರಧಾನಿ, ಮುಖ್ಯಮಂತ್ರಿ ತೆಗೆದುಕೊಳ್ಳುತ್ತಾರೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗುವುದು. ತಜ್ಞರ ವರದಿಯಲ್ಲಿ ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ' ಎಂದಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ, ಏಪ್ರಿಲ್‌ನಿಂದ ಇಲ್ಲಿಯವರೆಗೆ ಮೂರು ಬಾಲ್ಯ ವಿವಾಹದ ದೂರುಗಳು ಬಂದಿದ್ದು, ಎರಡು ಬಾಲ್ಯ ವಿವಾಹ ತಡೆಹಿಡಿಯಲಾಗಿದೆ. ಒಂದು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹೊರಗಡೆಯಿಂದ ಬೆಂಗಳೂರಿಗೆ ವಲಸೆ ಬಂದಿರುವ 513 ಮಕ್ಕಳಿಗೆ ಆಹಾರ ವಿತರಿಸಲಾಗಿದೆ' ಎಂದು ಸಚಿವರು ವಿವರಿಸಿದರು.

0 Comments