ಬೆಂಗಳೂರು: ವಿಧಾನಸಭಾ ಚುನಾವಣೆಗೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಇಲ್ಲಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿತವಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಮಂಗಳವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ರಾಜರಾಜೇಶ್ವರಿನಗರದ ತಮ್ಮ ನಿವಾಸದಲ್ಲಿ ಶೌಚಾಲಯ ಶುಚಿಗೊಳಿಸುವ ಪಿನಾಯಿಲ್ ಕುಡಿದು ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರ ಪತ್ನಿ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಭಾಕರ ರೆಡ್ಡಿ ಇತ್ತೀಚೆಗೆ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಸೇರಿದ್ದರು. ಜೊತೆಗೆ ಕ್ಷೇತ್ರದ ಜನತೆಗೆ ದಿನಸಿ ಕಿಟ್ ವಿತರಣೆ ಮಾಡಿದ್ದರು.
ಇಬ್ಬರು ಪತ್ನಿಯರನ್ನು ಹೊಂದಿದ್ದ ಪ್ರಭಾಕರ ರೆಡ್ಡಿ ಓರ್ವ ಪತ್ನಿಯಿಂದ ಕೊಲೆ ಯತ್ನ ನಡೆದ ಪ್ರಕರಣ ಒಳಗೊಂಡಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಐಷಾರಾಮಿ ಚಾಪರ್ನಲ್ಲಿ ಪ್ರವಾಸ ಕೈಗೊಂಡು ಈ ಹಿಂದೆ ಸುದ್ದಿಯಲ್ಲಿದ್ದರು.

0 Comments