ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊ0ದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಧಾನ ಮಂತ್ರಿಯವರು ಮಾತನಾಡಿ, ಯುರೋಪ್ ಮತ್ತಿತರ ರಾಷ್ಟçಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಮೂರನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು
ಪಾಸಿಟಿವಿಟಿ ದರ ಶೇ. 1.42 ರಷ್ಟಿದ್ದು, ಮರಣ ಪ್ರಮಾಣ ಶೇ. 1.25 ಕ್ಕೆ ಇಳಿದಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ರಾಜ್ಯದಲ್ಲಿ ಈ ವರೆಗೆ 2.62 ಕೋಟಿ ಲಸಿಕೆ ನೀಡಲಾಗಿದ್ದು, ಪ್ರತಿ ದಿನ 5 ಲಕ್ಷ ಡೋಸ್ ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕೋವಿಡ್ 19ರ ಪಾಸಿಟಿವಿಟಿ ದರ, ಪ್ರಕರಣಗಳ ಸಂಖ್ಯೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯವನ್ನು ಆಧರಿಸಿ, ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಕೋವಿಡ್ ಸೂಕ್ತ ನಡವಳಿಕೆಯನ್ನು ಖಾತರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ ಎಂದು ತಿಳಿಸಿದರು.

0 Comments