ಬೆಂಗಳೂರಿನ ಬನಶಂಕರಿ ಮೂರನೇ ಹಂತದಲ್ಲಿರುವ ಗುಪ್ತಾ ಕಾಲೇಜಿನಲ್ಲಿ ಇಂದು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಉಚಿತ ಲಸಿಕ ಶಿಬಿರವನ್ನು ಕಾಲೇಜು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿದ್ಯಾಪೀಠ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿ ಡಾ.ನಾಗಭೂಷಣ್ ರವರು ಮಾತನಾಡುತ್ತಾ, ಈ ಸನ್ನಿವೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಲಸಿಕೆ ಪಡೆದುಕೊಳ್ಳಲೇಬೇಕಾದ ಪರಿಸ್ಥಿತಿ ಬಂದೊದಗಿದೆ. ವಿದ್ಯಾರ್ಥಿಗಳು ಈ ಹಂತದಲ್ಲಿ ಮುನ್ನೆಚ್ಚರಿಕೆಯಿಂದ ಲಸಿಕೆಯನ್ನು ಪಡೆದುಕೊಳ್ಳುವುದು ಉತ್ತಮ ಎಂದರು.
ಶಿಬಿರವನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲ ಸುಧಾಕರ್ ರವರು ಮಾತನಾಡುತ್ತಾ ಕಳೆದ ಒಂದು ವರ್ಷದಿಂದ ಶೈಕ್ಷಣಿಕ ಚಟುವಟಿಕೆಗಳು ಕೋವಿಡ್-19 ಕಾರಣದಿಂದ ಏರು-ಪೇರು ಗಳಾಗಿವೆ. ವಿದ್ಯಾರ್ಥಿಗಳು ಅಭ್ಯಾಸದಿಂದ ಹೊರಗೆ ಉಳಿಯುತ್ತಿದ್ದಾರೆ. ಮುಂದೆ ಕೋವಿಡ್-19 ಮೂರನೇ ಅಲೆ ಡೆಲ್ಟಾ ಪ್ಲಸ್ ಬರುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ ಇಂತಹ ಸಂದರ್ಭದಲ್ಲಿ 18 ವರ್ಷದ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.
ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಲಸಿಕೆ ಪಡೆದುಕೊಂಡರು.








0 Comments