Ticker

6/recent/ticker-posts

Ad Code

Responsive Advertisement

ಓಲಾ ಎಲೆಕ್ಟ್ರಿಕ್ ಸ್ಕೂಟರ್: 24 ಗಂಟೆಗಳಲ್ಲಿ 1ಲಕ್ಷಕ್ಕೂ ಅಧಿಕ ಬುಕ್ಕಿಂಗ್!

 


ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ಓಲಾ ಕಂಪನಿಯು ಬುಕ್ಕಿಂಗ್ ಆರಂಭಿಸಿದ ಕೇವಲ 24 ಗಂಟೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಬೇಡಿಕೆ ಹರಿದುಬಂದಿದ್ದು, ಒಂದು ಲಕ್ಷಕ್ಕೂ ಅಧಿಕ ಗ್ರಾಹಕರು ಮುಂಗಡ ಹಣ ಪಾವತಿ ಬುಕ್ಕಿಂಗ್ ದಾಖಲಿಸಿದ್ದಾರೆ. ಹೊಸ ಸ್ಕೂಟರ್ ಖರೀದಿಗಾಗಿ ಕಂಪನಿಯು ಅಚ್ಚರಿ ಎನ್ನುವಂತೆ ರೂ. 499 ನಿಗದಿಪಡಿಸಿದ್ದು, ಬುಕ್ಕಿಂಗ್ ಆರಂಭವಾಗ ಕೆಲವೇ ಗಂಟೆಗಳ ಕಾಲ ಅಧಿಕೃತ ವೆಬ್‌ಸೈಟ್ ಕೂಡಾ ಸ್ಥಗಿತಗೊಳ್ಳುವಷ್ಟು ಬೇಡಿಕೆ ಹರಿದುಬಂದಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸೀರಿಸ್ ಎಸ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿಗಳಿದ್ದು, ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ(ಸಿಂಗಲ್ ಬ್ಯಾಟರಿ) 140 ಕಿ.ಮೀ ಮತ್ತು ಡ್ಯುಯಲ್ ಬ್ಯಾಟರಿ ಮಾದರಿಯು 240 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದೆಂದು ಹೇಳಲಾಗುತ್ತಿದೆ.

ಹೊಸ ವಾಹನ ಉತ್ಪಾದನಾ ಯೋಜನೆಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಆರಂಭಿಕ ಬಂಡವಾಳವಾಗಿ ರೂ. 2,400 ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಸದ್ಯ ಇವಿ ಸ್ಕೂಟರ್ ಮಾತ್ರ ಉತ್ಪಾದನೆ ಮಾಡಲಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರುಗಳನ್ನು ಸಹ ಅಭಿವೃದ್ದಿಪಡಿಸಲಿದೆ.

ವಾಹನ ಉತ್ಪಾದನೆಗಾಗಿ ಓಲಾ ಕಂಪನಿಯು ತಮಿಳುನಾಡಿನ ಹೊಸರಿನಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿಯಲ್ಲಿ ಅಭಿವೃದ್ದಿಗೊಳ್ಳುತ್ತಿದೆ. ಓಲಾ ಹೊಸ ವಾಹನ ಉತ್ಪದನಾ ಘಟಕವು ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದನೆ ಮಾಡಬಹುದಾದ ಸಾಮರ್ಥ್ಯ ಹೊಂದಿದ್ದು, ಹೊಸ ಘಟಕವು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಲಿದೆ. ಅತ್ಯಾಧುನಿಕ ಓಲಾ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಿವಿಧ ತಾಂತ್ರಿಕ ಕಾರ್ಯಗಳಿಗಾಗಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದ್ದು, ವರ್ಷಕ್ಕೆ 20 ಲಕ್ಷ ಸ್ಕೂಟರ್‌ಗಳನ್ನು ನಿರ್ಮಾಣ ಮಾಡುವ ಯೋಜನೆ ಸಿದ್ದಪಡಿಸಲಾಗಿದೆ.

ಏಷ್ಯಾದಲ್ಲಿಯೇ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಘಟಕವಾಗಿರುವ ಓಲಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದಲ್ಲಿ ಪ್ರತಿ 2 ಸೆಕೆಂಡುಗಳಲ್ಲಿ 1 ಎಲೆಕ್ಟ್ರಿಕ್ ಸ್ಕೂಟರ್ ಅಸ್ಲೆಂಬಿಗೊಳ್ಳಲಿದ್ದು, ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವಜ್ಞಾನದ ಆಧಾರದ ಮೇಲೆ ನಿರ್ಮಾಣ ಮಾಡಲಾಗುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನ ಓಲಾ ಕಂಪನಿಯು ದೇಶಾದ್ಯಂತ ಪ್ರಮುಖ 400 ನಗರಗಳಲ್ಲಿ 1 ಲಕ್ಷ ಫಾಸ್ಟ್ ಚಾರ್ಜರ್ ನಿಲ್ದಾಣಗಳನ್ನು ಮತ್ತು ಆಯ್ದ ಮೆಟ್ರೊ ನಗರಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ನೂರಾರು ಸ್ಕೂಟರ್‌ಗಳನ್ನು ಏಕಕಾಲಕ್ಕೆ ಚಾರ್ಜ್ ಮಾಡಬಹುದಾದ ಹೈಪರ್ ಚಾರ್ಜಿಂಗ್ ಪಾರ್ಕ್‌ಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಿದೆ.

ಓಲಾ ಕಂಪನಿಯು ಹೊಸ ಸ್ಕೂಟರ್ ಮಾದರಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ರಫ್ತು ಮಾಡುವ ಬೃಹತ್ ಯೋಜನೆ ಹೊಂದಿದ್ದು, ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಗಾಗಿ ನೇದರ್ಲ್ಯಾಂಡ್ ಮೂಲದ ಎಟರ್ಗೋ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಜೊತೆಗೂಡಿದೆ.

ಓಲಾ ಹೊಸ ಸ್ಕೂಟರ್ ಮಾದರಿಯು ಮಾರುಕಟ್ಟೆಯಲ್ಲಿರುವ ಹಲವು ಎಲೆಕ್ಟ್ರಿಕ್ ಮಾದರಿಗಳಿಗೆ ಬೆಲೆ ವಿಚಾರವಾಗಿ ಮತ್ತು ಮೈಲೇಜ್ ವಿಚಾರದಲ್ಲಿ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಪೆಟ್ರೋಲ್ ಬೆಲೆ ಹೆಚ್ಚಳದಿಂದಾಗಿ ಓಲಾ ಇವಿ ಸ್ಕೂಟರ್ ಮಾರಾಟ ಹೊಸ ದಾಖಲೆ ಸೃಷ್ಠಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

Post a Comment

0 Comments

Ad Code

Responsive Advertisement