Ticker

6/recent/ticker-posts

Ad Code

Responsive Advertisement

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

 


ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸುವುದಕ್ಕೂ ಮುನ್ನ ತಮ್ಮ ರಾಜಕೀಯ ಗುರು ಬಿಎಸ್ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ವೇದಿಕೆಯೇರಿದ ಬಸವರಾಜ್ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡರು.

ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕೊಠಡಿಯ ನಾಮಫಲಕ ಬದಲಾಗಿದೆ. ನಿನ್ನೆಯವರೆಗೆ ಬಿಎಸ್ ಯಡಿಯೂರಪ್ಪನವರ ಹೆಸರು ಇದ್ದರೆ ಇಂದು ಬಸವರಾಜ ಬೊಮ್ಮಾಯಿ ಸಿಎಂ ಎಂದು ನಾಮಫಲಕ ಅಲಂಕೃಗೊಂಡಿದೆ.

Post a Comment

0 Comments

Ad Code

Responsive Advertisement