Ticker

6/recent/ticker-posts

Ad Code

Responsive Advertisement

35 ಸಾವಿರ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

ಬಳ್ಳಾರಿ,ಜು. 18: ಬಳ್ಳಾರಿ ನಗರದಲ್ಲಿರುವ  35 ಸಾವಿರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮೂರು ಹಂತದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 7 ಸಾವಿರ ಜನರಿಗೆ ಕಿಟ್ ವಿತರಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಗರದ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೋವಿಡ್ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. 

ಈಗಾಗಲೇ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 3 ಸಾವಿರ ಸಹಾಯಧನ ನೀಡಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಜೊತೆಯಾಗಿ ಸರ್ಕಾರ ಇರಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಎಸ್.ಮಲ್ಲನಗೌಡ,ಕೋನಂಕಿ ತಿಲಕ್,ಹನುಮಂತಪ್ಪ ಕೆ. ವೀರಶೇಖರ್ ರೆಡ್ಡಿ, ಕಾರ್ಮಿಕ ಅಧಿಕಾರಿ ಕಮಲ್ ಅಲ್ತಾಫ್ ಅಹ್ಮದ್, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಇತರರು ಇದ್ದರು.


Post a Comment

0 Comments

Ad Code

Responsive Advertisement