Ticker

6/recent/ticker-posts

Ad Code

Responsive Advertisement

ಕಾಂಗ್ರೆಸ್ ನಿಂದ 50 ವರ್ಷಗಳಿಂದ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಅನ್ಯಾಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದರೆ, ಎಸ್‌ಸಿ/ಎಸ್‌ಟಿ ಸಮುದಾಯದ ಹಿರಿಯ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ  ನಾಯಕರುಗಳನ್ನು ಸಾಮಾಜಿಕ ನ್ಯಾಯ ಪರಿಷತ್ ರಾಜ್ಯ ಅಧ್ಯಕ್ಷ ಅನಂತರಾಯಪ್ಪ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಪಡೆದಿರುವ ಎಸ್‌ಸಿ/ಎಸ್‌ಟಿ ಸಮುದಾಯದ ನಾಯಕರು ಬಿಜೆಪಿಯಲ್ಲಿದ್ದಾರೆ. ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಅರಣ್ಯ ಸಚಿವ ಅರವಿಂದ ನಿಂಬಾವಳಿ ಈ ಮೂವರು ಹಿರಿಯ ನಾಯಕರುಗಳು ವಿವಿಧ ಖಾತೆಗಳ ಸಚಿವರಾಗಿ ಆಡಳಿತದ ಅನುಭವ ಪಡೆದಿದ್ದಾರೆ. ಇವರಲ್ಲಿ ಒಬ್ಬರನ್ನು  ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂಬುದು ಎಸ್‌ಸಿ/ಎಸ್‌ಟಿ ಸಮುದಾಯದ ಒತ್ತಾಯಿಸುತ್ತಿದೆ ಎಂದರು.  

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಶೇ 17 ರಷ್ಟಿರುವ ಲಿಂಗಾಯಿತ ಸಮುದಾಯದವರು 9 ಸಾರಿ ಮುಖ್ಯಮಂತ್ರಿಯಾಗಿದ್ದಾರೆ. ಸುಮಾರು ಶೇ16 ರಷ್ಟಿರುವ ಒಕ್ಕಲಿಗ ಸಮುದಾಯದವರು ಮುಖ್ಯಮಂತ್ರಿಯಾಗಿದ್ದಾರೆ. ಶೇ.5 ರಷ್ಟಿರುವ ಬ್ರಾಹ್ಮಣ ಸಮುದಾಯದವರು 2 ಸಾರಿ ಸಿಎಂ ಆಗಿದ್ದಾರೆ. ಹಿಂದುಳಿದ ವರ್ಗದವರು 5 ಸಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಶೇ. 24 ರಷ್ಟಿರುವ ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಇದುವರೆಗೆ ಒಮ್ಮೆಯಾದರೂ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ ಎಂದು ವಿವರಿಸಿದರು.  

ಕಾಂಗ್ರೆಸ್ ನಿಂದ 50 ವರ್ಷದಿಂದ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಅನ್ಯಾಯ

ಎಸ್‌ಸಿ/ಎಸ್‌ಟಿ ಸಮುದಾಯದ ಅಖಂಡ ಬೆಂಬಲದಿAದ 50 ವರ್ಷ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಪಕ್ಷ ಕೂಡ ಒಮ್ಮೆಯಾದರು ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿನೆಮಾಡಿತು.   ಕಾಂಗ್ರೆಸ್ ಮಾಡಿದ ಈ ಮೋಸದಿಂದ ಬೇಸತ್ತು ಎಸ್‌ಸಿ/ಎಸ್‌ಟಿ ಸಮುದಾಯದ ಬಹಳಷ್ಟು ಮತದಾರರು ಕಳೆದ ಚುನಾವಣೆಗಳಿಂದ ಬಿಜೆಪಿಗೆ ಮತನೀಡಲು ಪ್ರಾರಂಭಿಸಿದ್ದಾರೆ. ಇದರಿಂದ 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲಲು ಎಸ್‌ಸಿ/ಎಸ್‌ಟಿ ಸಮುದಾಯ ಬೆಂಬಲ ನೀಡಿದ್ದರಿಂದ ಇದು ಸಾಧ್ಯವಾಯಿತು ಎಂದು ಬಿಜೆಪಿ ವರಿಷ್ಠರು ಅರ್ಥಮಾಡಿಕೊಳ್ಳಬೇಕು ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘ ರಾಜ್ಯ ಅಧ್ಯಕ್ಷ ಜಂಬು ದ್ವೀಪ ಸಿದ್ದರಾಜು  ಅವರು ಹೇಳಿದರು.

ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಎಸ್‌ಸ್/ಎಸ್‌ಟಿ ಸಮುದಾಯದವರನ್ನು ಓಲೈಸುತ್ತವೆ. ಆದರೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಬಂದಾಗ ಬಲಾಡ್ಯ ಜಾತಿಗಳಿಗೆ ಮಣೆ ಹಾಕಿ ದಲಿತ ವರ್ಗವನ್ನು ಕಡೆಗಣಿಸುತ್ತವೆ. 2023 ಮತ್ತು 2024 ರಲ್ಲಿ ನಡೆಯಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಈ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು  ಮಾಡಿದ ಅನ್ಯಾಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

Post a Comment

0 Comments

Ad Code

Responsive Advertisement