ಬಳ್ಳಾರಿ,ಜು.23: ನಗರದ ಎಫ್‌ಪಿಎ ಇಂಡಿಯಾ ಕಚೇರಿ ಆವರಣದಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ 72ನೇ ಪ್ರತಿಷ್ಠಾನ ದಿನವನ್ನು ಶುಕ್ರವಾರ ಆಚರಿಸಲಾಯಿತು.ಎಫ್‌ಪಿಇ ಬಳ್ಳಾರಿ ಶಾಖಾ ವ್ಯವಸ್ಥಾಪಕಿ ವಿಜಯಲಕ್ಷಿ÷್ಮ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಎನ್ನುವುದು ಭಾರತದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯವನ್ನು ಕೇಂದ್ರೀಕರಿಸುವ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸುವ ಒಂದು ಸಾಮಾಜಿಕ ಪ್ರಭಾವ ಸಂಸ್ಥೆಯಾಗಿದೆ ಎಂದು ತಿಳಿಸಿದರು.
ಎಫ್‌ಪಿಎ ಸಂಸ್ಥೆಯೂ 1949ರಲ್ಲಿ ಸ್ಥಾಪನೆಯಾಗಿದೆ. ಭಾರತವು ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಕ್ಷೇತ್ರದಲ್ಲಿ ಏಳು ದಶಕಗಳ ಅನುಭವವನ್ನು ಹೊಂದಿದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎನ್‌ಜಿಒಗಳು ಮತ್ತು ರಾಷ್ಟಿçÃಯ ಮತ್ತು ಅಂತರರಾಷ್ಟಿçಯ ಧನಸಹಾಯ ಸಂಸ್ಥೆಗಳೊAದಿಗೆ ನಿಕಟ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತ್ತಿದೆ. ಎಫ್‌ಪಿಎ ಇಂಡಿಯಾ ವಾರ್ಷಿಕ 30 ದಶಲಕ್ಷಕ್ಕೂ ಹೆಚ್ಚು ಜನರನ್ನು ಮುಟ್ಟುತ್ತದೆ ಮತ್ತು ವ್ಯಾಪಕವಾದ ವ್ಯಾಪ್ತಿಯೊಂದಿಗೆ ಆಳವಾದ ಪ್ರಭಾವ ಬೀರಲು ಪ್ರಯತ್ನಿಸುತ್ತದೆ ಎಂದರು.
ಈ ಸಂಸ್ಥೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿ ಪಾಲುದಾರರು ಮತ್ತು ದಾನಿಗಳ ಬೆಂಬಲದೊAದಿಗೆ ವಿವಿಧ ಉಪಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು, ಎಲ್ಲಾ ಜನರು ಕಳಂಕ ಮತ್ತು ತಾರತಮ್ಯದಿಂದ ಮುಕ್ತವಾದ ಭಾರತದಲ್ಲಿ ಅವರ ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಆಯ್ಕೆಗಳು ಮತ್ತು ಹಕ್ಕುಗಳನ್ನು ಆನಂದಿಸಲು ಅಧಿಕಾರ ನೀಡಿದೆ ಎಂದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ನಡೆದು ಬಂದ ಘಟನಾವಳಿಗಳನ್ನು ಒಂದು ಬಾರಿ ಅವಲೋಕಿಸಿದಾಗ ಹೆಮ್ಮೆ ಎನಿಸುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸ್ತಿçರೋಗತಜ್ಞೆ ಡಾ.ಅನಿತಾ ಅವರು ಎಫ್‌ಪಿಎಐ ಬಳ್ಳಾರಿ ಶಾಖೆಯಲ್ಲಿ ಸಲ್ಲಿಸಿದ ಸೇವೆಗಳನ್ನು ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಎಫ್‌ಪಿಎಐ ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.


0 Comments