ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆಯವರು ದೆಹಲಿಯ ಕೃಷಿಭವನದಲ್ಲಿ ಪದಗ್ರಹಣ ಮಾಡಿದ್ದು ರೈತರ ಸಂಕೇತವಾದ ಹಸಿರು ಶಾಲು ಧರಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವರ ಕಾರ್ಯಭಾರ ವಹಿಸಿಕೊಂಡರು.
ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆಯವರು ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments