Ticker

6/recent/ticker-posts

Ad Code

Responsive Advertisement

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‌ಐಆರ್

 


ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜು.೧೨ರಂದು ರಕ್ಷಾ ರಾಮಯ್ಯ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತ್ತು.


ಯಾವುದೇ ಅನುಮತಿ ಪಡೆಯದೇ, ಸರ್ಕಾರದ ಲಾಕ್ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ ಕಾರಣ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, ಎನ್’ಡಿಎಂಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments

Ad Code

Responsive Advertisement