Ticker

6/recent/ticker-posts

Ad Code

Responsive Advertisement

ವಾರಾಂತ್ಯ ಕರ್ಫ್ಯೂ ಅಂತ್ಯ: ಮುಖ್ಯಮಂತ್ರಿ ಯಡಿಯೂರಪ್ಪ

 ಬೆಂಗಳೂರು, ಜುಲೈ 03: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಅಂತ್ಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ನೀಡಲಾಗಿದೆ.

ಮಾಲ್‌ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕರ್ಫ್ಯೂ ರಾತ್ರಿ ಒಂಭತ್ತು ಗಂಟೆಯಿAದ ಬೆಳಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರಲಿದೆ ಎನ್ನಲಾಗಿದೆ. ಮೆಟ್ರೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಸಡಿಲಗೊಳಿಸಲಾಗಿದೆ.

ಮದುವೆಯಲ್ಲಿ ನೂರು ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ, ಅಂತ್ಯಕ್ರಿಯೆಯಲ್ಲಿ 20 ಮಂದಿ ಪಾಲ್ಗೊಳ್ಳಬಹುದು, ಇದು ಜುಲೈ 5 ರಿಂದ 19ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಕಠಿಣ ನಿಬಂಧನೆಗಳನ್ನು ವಿಧಿಸಲಾಗುತ್ತದೆ.



Post a Comment

0 Comments

Ad Code

Responsive Advertisement