ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


0 Comments