ಭಾರತದ ೪೦ ಪತ್ರಕರ್ತರು ಹಾಗೂ ಭೀಮಾ ಕೋರೆಗಾಂವ್ ಪ್ರಕರಣಗಳ ಆರೋಪಿಗಳು ಸೇರಿದಂತೆ ಹನ್ನೆರಡು ಕಾರ್ಯಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆಯಂತೆ.
ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಭಾರತದ ಕೆಲವು ಸಚಿವರು, ವಿರೋಧ ಪಕ್ಷಗಳ ನಾಯಕರು, ಕಾನೂನು ಕ್ಷೇತ್ರದವರು ಉದ್ಯಮಿಗಳು, ಅಧಿಕಾರಿಗಳು, ವಿಜ್ಞಾನಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿ ಸುಮಾರು 300 ಭಾರತೀಯರ ಮೊಬೈಲ್‌ಗಳು ಹ್ಯಾಕ್ ಆಗಿವೆ ಎಂದು ಎಡಪಂಥಿಯ ಜಾಲತಾಣ "ದಿ ವೈರ್" ವರದಿ ಮಾಡಿದೆ.
ಹಿಂದೂಸ್ತಾನ್ ಟೈಮ್ಸ್, ಇಂಡಿಯಾ ಟುಡೇ, ನೆಟ್‌ವರ್ಕ್ 18, ದಿ ಹಿಂದೂ, ಇಂಡಿಯನ್ ಎಕ್ಸ್ಪ್ರೆಸ್‌ನಂಥ ದೊಡ್ಡ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಮಾಹಿತಿಯು ಸೋರಿಕೆಯಾದ ದತ್ತಾಂಶ ವರದಿಯಲ್ಲಿ ಕಂಡುಬಂದಿದೆ.
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಎಂಟು ಕಾರ್ಯಕರ್ತರು, ವಕೀಲರು ಹಾಗೂ ಶಿಕ್ಷಣ ತಜ್ಞರ ಮೊಬೈಲ್‌ಗಳು ಹ್ಯಾಕ್ ಆಗಿರುವುದಾಗಿ ತಿಳಿದುಬಂದಿದೆ. ಪತ್ರಕರ್ತರ ಪೈಕಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್, ಶಿಶಿರ್ ಗುಪ್ತಾ, ರಿತಿಕಾ ಛೋಪ್ರಾ, ಪ್ರಶಾಂತ್ ಝಾ, ಪ್ರೇಮ್ ಶಂಕರ್ ಝಾ, ಸ್ವಾತಿ ಚತುರ್ವೇದಿ, ರಾಹುಲ್ ಸಿಂಗ್, ಮುಜಾಮಿಲ್ ಜಲೀಲ್, ಇಫ್ತಿಯಾರ್ ಗಿಲಾನಿ, ಸಂದೀಪ್ ಉನ್ನಿತಾನ್, ಸಿದ್ಧಾರ್ಥ್ ವರದರಾಜನ್ ಹಾಗೂ ಎಂ.ಕೆ. ವೇಣು ಅವರ ಹೆಸರುಗಳು ಈ ಪಟ್ಟಿಯಲ್ಲಿರುವುದಾಗಿ ತಿಳಿದುಬಂದಿದೆ.
ಪೆಗಾಸಸ್ ಇಸ್ರೇಲ್‌ನ ಎನ್‌ಎಸ್‌ಒ ಅಭಿವೃದ್ಧಿಪಡಿಸಿದ ಗೂಢಚರ್ಯೆ ತಂತ್ರಾಂಶವಾಗಿದ್ದು, ಕೆಲವು ಲಿಂಕ್‌ಗಳನ್ನು ಮೊಬೈಲ್‌ಗಳಿಗೆ ಕಳುಹಿಸುವ ಮೂಲಕ ಫೋನ್‌ನಲ್ಲಿನ ಮಾಹಿತಿಯನ್ನು ಹ್ಯಾಕ್ ಮಾಡಲಾಗುತ್ತದೆ.
ಅಕ್ಟೋಬರ್ 20214ರಲ್ಲಿ ಇದೇ ರೀತಿ ಮಾಹಿತಿ ಸುದ್ದಿಯಾಗಿತ್ತು. ಇದರಲ್ಲಿ ಸತ್ಯಾಂಶವಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

0 Comments