ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೋಲಾರ ಅಮಾನಿ ಕೆರೆಯ ಅಂಗಣದಲ್ಲಿ ಹಮ್ಮಿಕೊಂಡಿದ್ದ ಕೋಲಾರ ಅಮಾನಿ ಕೆರೆ ಅಭಿವೃದ್ಧಿ ಹಾಗೂ ಸುಂದರೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್. ನಾಗೇಶ್, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಶ್ರೀನಿವಾಸಗೌಡ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಆರ್. ರಮೇಶ್ ಕುಮಾರ್, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹ್ಮದ್, ಗೋವಿಂದರಾಜು, ಡಾ.ಕೆ.ವೈ. ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷರಾದ ಶ್ವೇತಾ ಶಬರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ, ಜಿಲ್ಲಾಧಿಕಾರಿಗಳಾದ ಡಾ.ಆರ್. ಸೆಲ್ವಾಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕ ಕಿಶೋರಬಾಬು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಕಾರ್ಯಪಾಲಕ ಇಂಜಿನಿಯರ್ ರಾದ ಸುರೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.




0 Comments