Ticker

6/recent/ticker-posts

Ad Code

Responsive Advertisement

ನಳಿನ್‍ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಾಜಿ ರಾಜ್ಯಾಧ್ಯಕ್ಷ ಮನೋಹರ ತುಳಜಾರಾಮ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ವಾಸವಿದ್ದ ಅವರು ವಿಶ್ವ ಹಿಂದು ಪರಿಷತ್ತಿನ ಅಧ್ಯಕ್ಷರಾಗಿಯೂ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನೇರ ನಡೆ  ನುಡಿ, ಸರಳ – ಶಿಸ್ತಿನ ವ್ಯಕ್ತಿತ್ವದ ಶ್ರೀ ಮನೋಹರ ತುಳಜಾರಾಮ ಅವರು ಕಾರ್ಯಕರ್ತರ ಅಚ್ಚುಮೆಚ್ಚಿನ ಗುರುಗಳಾಗಿದ್ದರು. ಮಂಗಳೂರಿನಲ್ಲಿ ಎಬಿವಿಪಿ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಸೇವೆ ಅನನ್ಯವಾದದ್ದು ಎಂದು ಸ್ಮರಿಸಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.


Post a Comment

0 Comments

Ad Code

Responsive Advertisement