ಬೆಂಗಳೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯು ಜುಲೈ 2ರಂದು ಶುಕ್ರವಾರ ಜೆ.ಪಿ.ನಗರದಲ್ಲಿ ನಡೆಯಿತು.
ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ರಾಜ್ಯದ ಸಚಿವರಾದ ಶ್ರೀ ಗೋಪಾಲಯ್ಯ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ನೆ.ಲ.ನರೇಂದ್ರಬಾಬು, ಸಂಸದರಾದ ಶ್ರೀ ಪಿ.ಸಿ.ಮೋಹನ್, ಉಪಾಧ್ಯಕ್ಷರಾದ ಶ್ರೀ ಬಸವರಾಜು, ಶ್ರೀ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿವೇಕ್ ಡಬ್ಬಿ, ಶ್ರೀ ಸುರೇಶ್ ಬಾಬು, ರಾಜ್ಯ ಒಬಿಸಿ ಮೋರ್ಚಾ ಖಜಾಂಚಿಗಳಾದ ಶ್ರೀ ಗೋವಿಂದ ನಾಯ್ಡು ಅವರು ಭಾಗವಹಿಸಿದ್ದರು.
ರಾಜ್ಯದ ಒಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಮತ್ತು ಆಹ್ವಾನಿತರು ಈ ಸಭೆಯಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ಸಚಿವರಾದ ಶ್ರೀ ಗೋಪಾಲಯ್ಯ ಅವರು, ಕೇಂದ್ರದಲ್ಲಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಜನಪರವಾಗಿ ಕೆಲಸ ನಿರ್ವಹಿಸುತ್ತಿದೆ. ಕೋವಿಡ್‍ನ ಸಮರ್ಪಕ ನಿರ್ವಹಣೆ ಮೂಲಕ ಅದು ಇನ್ನಷ್ಟು ಜನಪ್ರಿಯತೆ ಗಳಿಸಿದೆ. ಕೋವಿಡ್‍ನಂಥ ಸಾಂಕ್ರಾಮಿಕದ ಸಂದರ್ಭದಲ್ಲೂ ಭಾರತವು ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿಲ್ಲ ಎಂದು ವಿವರಿಸಿದರು.
ರಾಜ್ಯ ಸರಕಾರವು ರೈತಪರ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸಂಕಷ್ಟದಿಂದಿರುವ ಜನತೆಗೆ ನೆರವಾಗಲು ಮುಖ್ಯಮಂತ್ರಿಗಳು ಈಗಾಗಲೇ ಎರಡು ನೆರವು ಪ್ಯಾಕೇಜ್‍ಗಳನ್ನು ಪ್ರಕಟಿಸಿದ್ದಾರೆ. ಕೋವಿಡ್‍ನಿಂದ ಮೃತರಾದ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೀಡುವ ವಿಶಿಷ್ಟ ಯೋಜನೆಯನ್ನೂ ಪ್ರಕಟಿಸಿದ್ದಾರೆ ಎಂದು ತಿಳಿಸಿದರು. ನಮ್ಮ ಇಲಾಖೆಯಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ಒಬಿಸಿ ಸಮುದಾಯಕ್ಕೆ ನೀಡಲು ಸಿದ್ಧನಿದ್ದೇನೆ ಎಂದೂ ಅವರು ಹೇಳಿದರು.
ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರು ಮಾತನಾಡಿ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯದಲ್ಲಿ ನಮ್ಮ ಪರವಾಗಿ ಒಬಿಸಿ ಸಮುದಾಯದ ಶೇಕಡಾ 50ಕ್ಕಿಂತ ಹೆಚ್ಚು ಮತಗಳಿವೆ. ಮುಂದಿನ ದಿನಗಳಲ್ಲಿ ಸಂಘಟನೆಯ ಬಲವರ್ಧನೆ ಮಾಡಬೇಕು. ಒಬಿಸಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ನೆ.ಲ.ನರೇಂದ್ರಬಾಬು ಅವರು ಮಾತನಾಡಿ, ರಾಜ್ಯದಾದ್ಯಂತ 5 ಲಕ್ಷಕ್ಕೂ ಹೆಚ್ಚು ಬೀಜದುಂಡೆಗಳನ್ನು (ಸೀಡ್ ಬಾಲ್) ಮಾಡಿ ಕೊಡಲು ನಿರ್ಧರಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಒಬಿಸಿ ಘಟಕವು ಸೇವಾ ಹೀ ಸಂಘಟನ್ ಕರೆಗೆ ನಿಸ್ವಾರ್ಥ ರೀತಿಯಲ್ಲಿ ಸ್ಪಂದಿಸಿದೆ ಎಂದು ತಿಳಿಸಿದರು. ಸಂಘಟನೆಯನ್ನು ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಅವರು ಹೇಳಿದರು.


0 Comments