Ticker

6/recent/ticker-posts

Ad Code

Responsive Advertisement

ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ನಿಯುಕ್ತಿಗೆ ಸಂದರ್ಶನ

ಬಳ್ಳಾರಿ,ಜು.22: ಬಳ್ಳಾರಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವಿಸಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಆ.03ರಂದು ಬೆಳಗ್ಗೆ 11ಕ್ಕೆ ಬಳ್ಳಾರಿಯ ಕೋಟೆ ಪ್ರದೇಶದಲ್ಲಿರುವ ಅಂಚೆ ಅಧಿಕ್ಷಕರ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು, 18 ರಿಂದ 50 ವರ್ಷದೊಳಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಮಾಜಿ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆ0ದು ಕಂಡು ಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು, ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು 5ಸಾವಿರ ರೂ.ಗಳನ್ನು ರಾಷ್ಟಿçಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ, ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು.


Post a Comment

0 Comments

Ad Code

Responsive Advertisement