Ticker

6/recent/ticker-posts

Ad Code

Responsive Advertisement

ಸಿಸಿಬಿಯಿಂದ ಒಂದು ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

 


ರಾಮಮೂರ್ತಿನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆ ಹಾಗೂ ಕೇರಳ ಮೂಲದ ನಾಲ್ವರನ್ನು ಬಂಧಿಸಿದ ಸಿಸಿಬಿ ಪೊಲೀಸರು 55 ಲಕ್ಷ ರೂ. ಮೌಲ್ಯದ ಎಕ್ಸಟೆಸಿ, ಎಂಡಿಎಂಎ ಪಿಲ್, ಎಲ್‌ಎಲ್ ಸಿ ಪೇಪರ್ ವಶಪಡಿಸಿಕೊಂಡಿದ್ದಾರೆ.

ಗ್ರಾಹಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


 

ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನಿಂದ ಮಾದಕ ವಸ್ತು ತರಿಸಿದ್ದ ಕೇರಳ ಮೂಲದ ನಾಲ್ವರು ಡ್ರಗ್ ಡೀಲರ್‌ಗಳು ಬಂಧನಕ್ಕೆ ಒಳಗಾಗಿದ್ದಾರೆ. ಹೊರಮಾವು ಸಮೀಪದ ಬಂಜಾರ ಬಡಾವಣೆಯಲ್ಲಿ ತಂಗಿದ್ದ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಐಶರಾಮಿ ಕುಟುಂಬ ಹಿನ್ನೆಲೆಯುಳ್ಳವರನ್ನು ಸಂಪರ್ಕಿಸಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಇವರ ವಿರುದ್ಧ ರಾಮಮೂರ್ತಿನಗರ ಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನನ್ನು ಬಂಧಿಸಿ ಸುಮಾರು 50 ಲಕ್ಷ ರೂ. ಮೌಲ್ಯದ ಕೊಕೇನ್, ಎಕ್ಸಟೆಸಿ ಪಿಲ್ಸ್, ಯಾಬಾ ಹಾಗೂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಬಾಗಲೂರಿನ ಮನೆಯೊಂದರಲ್ಲಿ ತಂಗಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Post a Comment

0 Comments

Ad Code

Responsive Advertisement