Ticker

6/recent/ticker-posts

Ad Code

Responsive Advertisement

ನಿಖಿಲ್‌ನನ್ನು ಸುಮಲತಾ ಸೋಲಿಸಿದ್ದಕ್ಕೆ ಸಂಸದೆ ಮೇಲೆ ಕುಮಾರಸ್ವಾಮಿ ಆರೋಪ; ಸಿದ್ದರಾಮಯ್ಯ


ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ, ಸುಮಲತಾ ವಿರುದ್ಧ ರಾಜಕೀಯ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ ರೂ. 17 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ ಎಂದು ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂದು ಸುಮಲತಾ ಆರೋಪ ಮಾಡಿದ್ದಾರೆ. ಈ ಬಗ್ಗೆ ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದರು.

ಕೆಆರ್‌ಎಸ್‌ನ 20 ಕಿ.ಮೀ ಸುತ್ತಮುತ್ತ  ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಲಾಗಿದೆ. ಆಡಳಿತ ಪಕ್ಷ ಕೂಡ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.

Post a Comment

0 Comments

Ad Code

Responsive Advertisement