ಕನ್ನಡ ಸಾಹಿತ್ಯ ಪರಿಷತ್ತು 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2021ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ. 50-00 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
ರೂ.25-00 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ(ಬೆಂಗಳೂರು) ದಿನಾಂಕ 01-07-2021ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584 ಇವರನ್ನು ಸಂಪರ್ಕಿಸಬಹುದು.
0 Comments