ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗುವುದಾಗಿ ತಿಳಿಸಲಾಗಿದೆ. ಜುಲೈನಲ್ಲಿ ಶೇ.94 -106 ಮಳೆ ಜುಲೈ ತಿಂಗಳ 2ನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ. ಆಗ ದೇಶಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ತಿಳಿಸಿದ್ದಾರೆ.
ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ: ಕಳೆದ ವಾರ ಜೋರಿದ್ದ ಮಳೆ ಈ ವಾರ ಇಳಿಕೆಯಾಗಿದೆ. ನೈರುತ್ಯ ಮುಂಗಾರಿನಲ್ಲಿ ಜುಲೈ.08ರ ನಂತರ ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

0 Comments