Ticker

6/recent/ticker-posts

Ad Code

Responsive Advertisement

ಭಾರತದಲ್ಲಿ ಕೊರೋನಾ ಕಣ್ಣಾಮುಚ್ಚಾಲೆ ಆಟ!

 


ದೇಶದಲ್ಲಿಂದು 42,015 ಹೊಸ ಕೇಸ್ ಪತ್ತೆ, 3,998 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆಯ ಏರಿಳಿತ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 42,015 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಬರೋಬ್ಬರಿ 3,998 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,12,16,337ಕ್ಕೆ ತಲುಪಿದ್ದು, ಸಾವಿನ 4,18,480ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,07,170ಕ್ಕೆ ಕುಸಿದಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 40,026 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,03,90,687ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,52,140 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,91,93,273 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 41,54,72,455 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Post a Comment

0 Comments

Ad Code

Responsive Advertisement