ತೀಯ ಪಿಯು(2nd PUC) ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿರಲಿಲ್ಲ. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಹಾಗೂ ಆಂತರಿಕ ಅಂಕಗಳ ಮೌಲ್ಯ ಮಾಪನ ನಡೆಸಿ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ. ಅದರಂತೆ ಇಂದು ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ Know My Register Number ಮೂಲಕ ರಿಜಿಸ್ಟರ್ ನಂಬರ್ನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ.
ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳಿಗೆ ಒಪ್ಪಿಗೆ ಇಲ್ಲವಾದರೆ ಆಗಸ್ಟ್ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಆಗ ಅವರು ಎಕ್ಸಾಂ ಬರೆಯಬಹುದಾಗಿದೆ. ಪರೀಕ್ಷೆಯ ಫಲಿತಾಂಶವನ್ನೂ ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಮತ್ತೆ ಹಳೇ ಅಂಕ ಪಡೆಯಲು ಅವಕಾಶ ಇಲ್ಲ ಎಂದು ಪಿಯು ಮಂಡಳಿ ಸ್ಪಷ್ಟವಾಗಿ ಹೇಳಿದೆ. 5 ಲಕ್ಷದ 90 ಸಾವಿರದ 153 ಹೊಸ ವಿದ್ಯಾರ್ಥಿಗಳು ಮತ್ತು 76, 344 ರಿಪೀಟರ್ಸ್ ಸೇರಿದಂತೆ ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.ಈ ವರ್ಷ ದ್ವಿತೀಯ ಪಿಯುಸಿಗೆ ಪರೀಕ್ಷೆ ನಡೆಸದೆ ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶ ನೀಡುವುದಾಗಿ ಈ ಹಿಂದೆ ಸರ್ಕಾರ ಘೋಷಿಸಿತ್ತು. ಆದರೆ ಬಳಿಕ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡುವುದಾಗಿ ಹೇಳಿತ್ತು. ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ, ಪ್ರಥಮ ಪಿಯುಸಿ ಅಂಕಗಳನ್ನು ಮಾನದಂಡವನ್ನಾಗಿ ಪರಿಗಣಿಸಿ, ವೃತ್ತಿಪರ ಕೋರ್ಸ್ಗೆ ಸಿಇಟಿ ಪರೀಕ್ಷೆಯ ಫಲಿತಾಂಶ ಪರಿಗಣಿಸುವುದಾಗಿ ಹೇಳಿದೆ.
ಈ ಬಾರಿ RANK ಇರುವುದಿಲ್ಲ. CBSE ಮಾದರಿಯಲ್ಲಿ ಎಸ್ಎಸ್ಎಲ್ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಕೊಡಲಾಗುತ್ತದೆ.
ಪಿಯು ಮಂಡಳಿ ಈ ಬಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ರಿಜಿಸ್ಟರ್ ನಂಬರ್ ಸೃಷ್ಟಿಸಿದೆ. ಇದನ್ನು ಕೂಡ ಮಂಡಳಿಯ ವೆಬ್ಸೈಟ್ ಮೂಲಕವೇ ಪಡೆಯಬೇಕಾಗಿದೆ. ಈಗಾಗಲೇ ಈ ರಿಜಿಸ್ಟರ್ ನಂಬರ್ ಪಡೆಯಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ನ್ನು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್ ಮಾಡಿ ನಂತರ ರಿಸಲ್ಟ್ ಪಡೆಯಬೇಕು.
ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ನ್ನು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್ ಮಾಡಿ ನಂತರ ರಿಸಲ್ಟ್ ಪಡೆಯಬೇಕು.
ವೆಬ್ಸೈಟ್ http://pue.kar.nic.in/ ತೆರೆದ ಕೂಡಲೇ ನಿಮಗೆ Know my Register Number ಲಿಂಕ್ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ರಿಜಿಸ್ಟರ್ ನಂಬರ್ ಸಿಗಲಿದೆ.
ಈ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.

0 Comments