ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಆರಗ ಜ್ಞಾನೇಂದ್ರ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 'ಮೈಸೂರಿನಲ್ಲಿ ಯುವಕ-ಯುವತಿ ರಾತ್ರಿ 7.30 ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಆ ವೇಳೆಯಲ್ಲಿ ಅಲ್ಲಿಗೆ ಹೋಗಬಾರದಿತ್ತು' ಎಂದು ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ತಿಳಿಸಿದ್ದರು.
'ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಬಗ್ಗೆ ತಮಗೆ ಸಹಮತ ಇಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
'ಆ ವೇಳೆಯಲ್ಲಿ ಅಲ್ಲಿಗೆ ಹೋಗಬೇಡಿ ಎಂದು ಅವರನ್ನು ತಡೆಯುವುದಕ್ಕೆ ಆಗುವುದಿಲ್ಲ. ಯುವಕ-ಯುವತಿ ಆಘಾತಕ್ಕೆ ಒಳಗಾಗಿದ್ದಾರೆ. ಅವರಿಂದ ಸಂಪೂರ್ಣ ಹೇಳಿಕೆಯನ್ನು ಪಡೆಯಲು ಸಾಧ್ಯವಾಗಿಲ್ಲ' ಎಂದು ಹೇಳಿದ್ದರು.
ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಸ್ವತಃ ಮುಖ್ಯಮಂತ್ರಿಗಳೇ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯ ಪ್ರಗತಿಯನ್ನು ತಮಗೆ ನೇರವಾಗಿ ವರದಿ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

0 Comments