Ticker

6/recent/ticker-posts

Ad Code

Responsive Advertisement

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅಧ್ಯಕ್ಷತೆಯಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

 ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ಅಧ್ಯಕ್ಷತೆಯಲ್ಲಿ ಇಂದಿರಾನಗರದ ಕೆಯುಐಡಿಎಫ್ ಸಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.




ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀ ಎಮ್.ಎನ್. ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಶ್ರೀಮತಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಶ್ರೀ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ತುಮಕೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

2019-20 ನೇ ಸಾಲಿನಲ್ಲಿ 700 ಕೋಟಿ ರೂಪಾಯಿಗಳು, 2020-21 ನೇ ಸಾಲಿನಲ್ಲಿ 1300 ಕೋಟಿ ರೂಪಾಯಿಗಳು ಮತ್ತು 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೆ 537 ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳ ಮೂಲಕ ಕಾಮಗಾರಿಗಳಿಗೆ ವೆಚ್ಚ ಮಾಡಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ದೇಶದ ಇತರೆ ರಾಜ್ಯಗಳ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕರ್ನಾಟಕ ಅನುಷ್ಠಾನದಲ್ಲಿ 6ನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿದರು.

 ಬಾಕಿ ಉಳಿದಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಮೊದಲ ಸ್ಥಾನ ಪಡೆಯಬೇಕು ಎಂದು ಮಾನ್ಯ ಸಚಿವರು ಸೂಚಿಸಿದರು.

-Varthajala suddi mane, Bengaluru

Post a Comment

0 Comments

Ad Code

Responsive Advertisement