ಸ್ವಾತಂತ್ರ್ಯ ದಿನಾಚರಣೆ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಭಾಷಣ ಜನರ
ಸಂಕಟಗಳತ್ತ ಗಮನ ಹರಿಸಲಿಲ್ಲ, ಇದು ಜೀವನ ಹಾಳಾಗುವುದನ್ನು ಮುಂದುವರಿಸುವ ಅಶುಭದ
ಎಚ್ಚರಿಕೆ ಎಂದು ಪ್ರತಿಪಕ್ಷಗಳು ಹೇಳಿವೆ.
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 20ರಿಂದ 30ರವರೆಗೆ ದೇಶಾದ್ಯಂತ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ನಡೆಸಿದ ವರ್ಚುಯಲ್ ಸಭೆಯ ನಂತರ 19 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆಯಲ್ಲಿ ಈ ವಿಷಯವನ್ನು ತಿಳಿಸಿವೆ.
0 Comments