ಬಳ್ಳಾರಿ,ಆ.17: ಬಳ್ಳಾರಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಎನ್.ರಾಜು ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಎನ್.ರಾಜು ಅವರು ದಾವಣಗೆರೆಯ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸುತ್ತಿದ್ದರು. ಎನ್.ರಾಜು ಅವರನ್ನು ಬಳ್ಳಾರಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರನ್ನಾಗಿ ನೇಮಿಸಲಾಗಿದೆ.


0 Comments