ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ನೂತನವಾಗಿ ನಿರ್ಮಿಸಲಾಗಿರುವ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ.ಮೀ ಮೆಟ್ರೋ ನೇರಳೆ ಮಾರ್ಗದ ಉದ್ಘಾಟನಾ ಸಮಾರಂಭವನ್ನು ದಿನಾಂಕ: 29-08-2021 ರಂದು ಬೆಳಿಗ್ಗೆ 10.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ನೆರವೇರಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದ ವರದಿಗಾಗಿ ಅನುವಾಗುವಂತೆ ಸಮಾರಂಭದ ಆಮಂತ್ರಣ ಪತ್ರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ದಿನಾಂಕ: 28-08-2021 ರ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಿತರಿಸಲಾಗುವುದು. ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಹೊಂದಿದವರಿಗೆ ಮಾತ್ರ ಅವಕಾಶವಿರುತ್ತದೆ.
ಮೈಸೂರು ರಸ್ತೆ ಮೆಟ್ರೋ ನಿಲ್ದಾಣ - ಕೆಂಗೇರಿ ಮೆಟ್ರೋ ನಿಲ್ದಾಣದ
7.5 ಕಿ.ಮೀ. ಮೆಟ್ರೋ ನೇರಳೆ ಮಾರ್ಗ ಉದ್ಘಾಟನಾ ಸಮಾರಂಭ:
ಮುಖ್ಯ ಅತಿಥಿಗಳು:
ಅಧ್ಯಕ್ಷತೆ:
ಕಾರ್ಯಕ್ರಮ: ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣ - ಸಮಯ: ಬೆಳಿಗ್ಗೆ 10.30 ಗಂಟೆಗೆ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹೊಂದಿದ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶ.
ಹಸಿರು ನಿಶಾನೆ:
ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.ಹರ್ದೀಪ್ ಸಿಂಗ್ ಪುರಿ
ಕೇಂದ್ರ ವಸತಿ, ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರು, ಭಾರತ ಸರ್ಕಾರ.ಮುಖ್ಯ ಅತಿಥಿಗಳು:
ಶ್ರೀಮತಿ ನಿರ್ಮಲಾ ಸೀತಾರಾಮನ್,
ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರರಾಜೀವ್ ಚಂದ್ರಶೇಖರ್
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರು, ಭಾರತ ಸರ್ಕಾರ.ಅಧ್ಯಕ್ಷತೆ:
ಎಸ್.ಟಿ.ಸೋಮಶೇಖರ್
ಸಹಕಾರ ಸಚಿವರು, ಕರ್ನಾಟಕ ಸರ್ಕಾರ.ದಿನಾಂಕ: 29-08-2021, ಭಾನುವಾರ
ಹಸಿರು ನಿಶಾನೆ: ನಾಯಂಡಹಳ್ಳಿ ಮೆಟ್ರೋ ನಿಲ್ದಾಣ - ಸಮಯ: ಬೆಳಿಗ್ಗೆ 10.00 ಗಂಟೆಗೆಕಾರ್ಯಕ್ರಮ: ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣ - ಸಮಯ: ಬೆಳಿಗ್ಗೆ 10.30 ಗಂಟೆಗೆ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹೊಂದಿದ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶ.


0 Comments