Ticker

6/recent/ticker-posts

Ad Code

Responsive Advertisement

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ: ಮಾರ್ಗಸೂಚಿ ಪ್ರಕಟ

 


2021-22ನೇ ಸಾಲಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸ್ತುತ ಬೋಧಿಸುತ್ತಿರುವ ಮಾಧ್ಯಮಗಳ ಜತೆಗೆ ಹೆಚ್ಚುವರಿಯಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆಗೆ ಅವಕಾಶ ನೀಡುವಂತೆ ಜಿಲ್ಲಾ ಉಪನಿರ್ದೇಶಕರ ಶಿಫಾರಸಿನೊಂದಿಗೆ ಪ್ರಸ್ತಾವನೆ ಬಂದಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಅನುಮೋದನೆ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚಿಸಿದ್ದು, ಈ ವೇಳೆ ಅನುಸರಿಸಬೇಕಾದ ಮಾರ್ಗ ಸೂಚಿಗಳನ್ನು ಸಹ ಬಿಡುಗಡೆ ಮಾಡಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ನಿಯಮಾನುಸಾರ ಈ ಸಂಬಂಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜತೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ ಆರಂಭವಾಗುವ ಸಾಧ್ಯತೆ ಇದೆ.

Post a Comment

0 Comments

Ad Code

Responsive Advertisement