Ticker

6/recent/ticker-posts

Ad Code

Responsive Advertisement

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸಕ್ಕೆ ಬೊಮ್ಮಾಯಿ ತಿರುಗೇಟು


 ಆರ್‌ಟಿ ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಯಾವುದೇ ಪಕ್ಷದವರಾದರೂ ಕೂಡ ಮೇಕೆದಾಟನ್ನು ರಾಜಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದರು.

ಈಗಾಗಲೇ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಒಪ್ಪಿಗೆ ನೀಡಲಿದ್ದಾರೆ. ಆದಷ್ಟು ಶೀಘ್ರ ಡಿಪಿಆರ್‌ಗೆ ಅನುಮತಿ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲವೂ ಕ್ಲಿಯರ್ ಆದ ಕೂಡಲೇ ಕಾಮಗಾರಿ ಆರಂಭ ಮಾಡುವುದು ಶತಸಿದ್ಧ ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳುವ ಮೂಲಕ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು.

Post a Comment

0 Comments

Ad Code

Responsive Advertisement