Ticker

6/recent/ticker-posts

Ad Code

Responsive Advertisement

ದೇಶದಲ್ಲಿ ಒಂದು ತಿಂಗಳಿನಿಂದ ಬದಲಾಗಿಲ್ಲ ಇಂಧನ ದರ!


 

 ಜಾಗತಿಕವಾಗಿ ಕಚ್ಚಾತೈಲ ಬೆಲೆ ಕಳೆದ ವಾರದಲ್ಲಿ ತೀವ್ರ ಏರಿಳಿತ ಕಂಡಿದೆ. ಪ್ರತಿ ಬ್ಯಾರೆಲ್ ಬೆಲೆ 70 ಯುಎಸ್ ಡಾಲರ್ ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿದೆ. ಆದರೆ, ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 30 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.

ಆಗಸ್ಟ್ 16ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮಿಕ್ಕಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ 13ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಇಳಿಕೆ ಕಂಡು 69.82 ಯುಎಸ್ ಡಾಲರ್(1$=74.25ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ.

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು : ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರೂ ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

Post a Comment

0 Comments

Ad Code

Responsive Advertisement