ಬಳ್ಳಾರಿ ಆ 22. ವಿಜಯನಗರ ಜಿಲ್ಲೆ ಹೊಸಪೇಟೆ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಎಂ. ವೆಂಕಯ್ಯನಾಯುಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ, ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ ಅವರು ಬರಮಾಡಿಕೊಂಡರು.ನAತರ ಗೋಕುಲ ರಸ್ತೆಯ ಖಾಸಗಿ ಹೊಟೆಲ್‌ವೊಂದರಲ್ಲಿ ಏರ್ಪಡಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮರಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಯವರು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.
0 Comments