ಬೆಂಗಳೂರು: ಬಿಜೆಪಿ ಹಿರಿಯ ನಾಯಕರು, ಅಯೋಧ್ಯೆಯ ಶ್ರೀರಾಮ ಮಂದಿರದ ಜನಾಂದೋಲನದ ಮುಂಚೂಣಿ ನಾಯಕರು ಮತ್ತು ಹಿಂದೂ ರಾಷ್ಟ್ರೀಯವಾದಿ ಶ್ರೀ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಮತ್ತು ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆದ ಶ್ರೀ ಕಲ್ಯಾಣ್ ಸಿಂಗ್ ಅವರ ನಿಧನದಿಂದ ಪಕ್ಷವು ಒಬ್ಬ ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
0 Comments