ಬಳ್ಳಾರಿ ಆ 03. ರಾಜ್ಯಸಭಾ ಸಂಸದ ಡಾ. ಸೈಯ್ಯದ್ ನಾಸೀರ್ ಹುಸೇನ್ ರವರು ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಂದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷರು ಡಿ.ಕೆ ಶಿವಕುಮಾರ್ ರವರು, ವಿಧಾನ ಸಭೆಯ ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯ ರವರು, ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರಾದ ಎಸ್ ಆರ್ ಪಾಟೀಲ್, ಮುನಿಯಪ್ಪ, CWC ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ ಮತ್ತು ರಾಮಲಿಂಗಾ ರೆಡ್ಡಿ ಹಾಗೂ ಮತ್ತಿತರರು ಹಾಜರಿದ್ದರು.

0 Comments