Ticker

6/recent/ticker-posts

Ad Code

Responsive Advertisement

ಹಂತ ಹಂತವಾಗಿ ಶಾಲೆ ಪ್ರಾರಂಭಿಸಲಾಗುವುದು: ಸಿಎಂ ಬಸವರಾಜ್ ಬೊಮ್ಮಾಯಿ

 


ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಸೋಮವಾರದಿಂದ ಶಾಲೆ ಆರಂಭವಾಗಲಿದೆ. ಸರ್ಕಾರದಿಂದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನನ್ನ ಜೊತೆ ಶಿಕ್ಷಣ ಸಚಿವರು ಕೂಡ ಶಾಲೆಗಳಿಗೆ ಭೇಟಿ ನೀಡುತ್ತಾರೆ ಎಂದರು.

ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್‌ ನೀಡಲಾಗಿದೆ. ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು. ಪೋಷಕರ ಸಮ್ಮತಿಯನ್ನು ಪಡೆದು ಮಕ್ಕಳು ಶಾಲೆಗೆ ಬರತಕ್ಕದು. ಪೋಷಕರು ಕೂಡ ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಂತ ಹಂತವಾಗಿ ಶಾಲೆಯನ್ನು ಪ್ರಾರಂಭವಾಗ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


Post a Comment

0 Comments

Ad Code

Responsive Advertisement