Ticker

6/recent/ticker-posts

Ad Code

Responsive Advertisement

ಮನೆ ಕಳೆದುಕೊಂಡ ಸಂತ್ರಸ್ತರೊಂದಿಗೆ ಸಚಿವ ಬಿ.ಎ.ಬಸವರಾಜ ....

ಕೊರೊನಾ ನಿಯಂತ್ರಣ ಮತ್ತು ಮಳೆ ಹಾನಿ ಪರಿಹಾರ ನೀಡುವ ಸಲುವಾಗಿ ದಾವಣಗೆರೆ ಜಿಲ್ಲೆಯ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ದಿನಾಂಕ 6-8-2021 ರ ಶುಕ್ರವಾರ ಬೆಳಿಗ್ಗೆ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರೊಂದಿಗೆ  ಮಾತನಾಡಿದರು.



ಮಳೆಯಿಂದಾಗಿ ಜೀವನ ಅಸ್ತವ್ಯಸ್ತತೆ ಯಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ಸಚಿವರ ಬಳಿ ತೊಡಿಗಕೊಂಡರು. 

ಗ್ರಾಮದಲ್ಲಿ ಹಾನಿಗೊಳಗಾದ ಕೆಲ ಸ್ಥಳಗಳನ್ನು ವೀಕ್ಷಣೆ ಮಾಡಲು ಮ‌ೂಲಕ ನೈಜ ಪರಿಸ್ಥಿತಿಯನ್ನು ಅವಲೋಕಿಸಿದ ಶ್ರೀ ಬಸವರಾಜ ಅವರು ಸ್ಥಳದಲ್ಲಿನ ಇದ್ದ ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬೀಳಗಿ, ಹರಿಹರ ತಹಶಿಲ್ದಾರ ಹಾಗೂ ಇತರೆ ಅಧಿಕಾರಿ ವರ್ಗದವರಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಮನೆ ಕಳೆದುಕೊಂಡವರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲು ಹಾಗೂ ಅವರಿಗೆ ಊಟದ ವ್ಯವಸ್ಥೆ ಮತ್ತು ಹಾನಿಗೆ ತಕ್ಕಂತೆ ಪರಿಹಾರ ಒದಗಿಸಲು ಸಚಿವರು ಜಿಲ್ಲಾಡಳಿತಕ್ಕೆ ಆದೇಶಿಸಿದರು.

ಜಿಲ್ಲಾ ಪಂಚಾಯತ ಸಿಇಓ ವಿಜಯ ಮಹಾಂತೇಶ್, ಪೋಲಿಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಹಲ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement